ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ, ವಾಮದಪದವು ಎಸ್ ಎಸ್ ಎಲ್ ಸಿ-ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ವಿಶ್ವ ಭಾತೃತ್ವದ ಸಂದೇಶವನ್ನು ಮೈಗೂಡಿಸಿಕೊಂಡು ಮುನ್ನಡೆದರೆ ಸುಂದರ ಸಮಾಜ ನಿರ್ಮಾಣ ಸಾಧ್ಯ ಎಂದು ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರಾ ಹೇಳಿದ್ದಾರೆ. ವಾಮದಪದವು
ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ವತಿಯಿಂದ ಆಲದಪದವಿನ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮುದಾಯ ಭವನದಲ್ಲಿ ಭಾನುವಾರ ನಡೆದ ಎಸ್ ಎಸ್ ಎಲ್ ಸಿಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ನೆರವೇರಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ಬಗ್ಗೆ ಗಂಭೀರವಾಗಿ ಯೋಚಿಸಬೇಕು, ಇಂದಿನ ಸವಾಲುಗಳನ್ನು ಎದುರಿಸಿ ಉತ್ತಮ ನಾಗರಿಕರಾಗಿ ಬದುಕು ನಡೆಸುವತ್ತ ಹೆಜ್ಜೆ ಇಡಬೇಕು ಎಂದರು.
ಸ್ಥಳದಾನಿ ಮೋನಪ್ಪ ಪೂಜಾರಿ ಪಾಲೆದಡಿ ಕಾರ್ಯಕ್ರಮ ಉದ್ಘಾಟಿಸಿದರು.
ಸಂಘದ ಅಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ ಅಧ್ಯಕ್ಷತೆ ವಹಿಸಿದ್ದರು.
ವಿದ್ಯೆಯಿಂದ ಸ್ವತಂತ್ರರಾಗಿರಿ ಎಂಬ ಗುರುಗಳ ವಾಕ್ಯದಂತೆ ಶೈಕ್ಷಣಿಕ ಪ್ರಗತಿಗೆ ಪೂರಕವಾದ ಕಾರ್ಯಕ್ರಮಗಳನ್ನು ಸಂಘದ ವತಿಯಿಂದ ನಿರಂತರ ನಡೆಸಲಾಗುವುದು ಎಂದು ಅವರು ಹೇಳಿದರು. ಚೆನ್ನೈತೋಡಿ ಗ್ರಾಮಪಂಚಾಯತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಇರ್ವ ತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಪಿ ಶೇಖರ್ ಪೂಜಾರಿ ಶುಭ ಹಾರೈಸಿದರು.
ಪತ್ರಕರ್ತ ಗೋಪಾಲ ಅಂಚನ್ ಅಭಿನಂದನಾ ಭಾಷಣ ಮಾಡಿದರು.


ಪಂಚಾಯತಿ ಸದಸ್ಯರಾದ ಲಿತೇಶ್ ಪೂಜಾರಿ, ಗೀತಾ, ಉದ್ಯಮಿಗಳಾದ ಶೇಖರ್ ಪೂಜಾರಿ ಅಗಲ್ದೋಡಿ, ಕಿಶೋರ್ ಕುಮಾರ್ ನಾಯರ್ ಕುಮೇರು ಉಪಸ್ಥಿತರಿದ್ದರು.
ಮೆ.8ರಂದು ನಡೆದ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನ ಲೋಕಾರ್ಪಣೆ ಹಾಗೂ ಗುರುಪೂಜೋತ್ಸವದ ಲೆಕ್ಕಪತ್ರವನ್ನು ಸಭೆಯಲ್ಲಿ ಮಂಡಿಸಲಾಯಿತು. ಸಂಘದ ಕಾರ್ಯದರ್ಶಿ ಚಂದಪ್ಪ ಪೂಜಾರಿ ಆಗಮೆ ಕಾರ್ಯಕ್ರಮ ನಿರೂಪಿಸಿದರು.
ಕೀರ್ತನ್ ಕುಮಾರ್ ಕುದ್ಕಂದೋಡಿ ಸ್ಚಾಗತಿಸಿದರು. ರೂಪೇಶ್ ಕುಮಾರ್ ವಂದಿಸಿದರು. ಕಿರಣ್ ಕುಮಾರ್ ಹಲೆಪ್ಪಾಡಿ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು.