ಇರ್ವತ್ತೂರುಪದವು: ಆರನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವ, ಶಾರದಾ ತಿಲಕ ಪ್ರಶಸ್ತಿ ಪ್ರದಾನ

ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಭಾನುವಾರ ಮೂಡುಪಡುಕೋಡಿ ಶಾಲಾ ವಠಾರದಲ್ಲಿ ನಡೆದ ೬ನೇ ವರ್ಷದ ಶ್ರೀ ಶಾರದಾ ಪೂಜಾ ಮಹೋತ್ಸವದ ಧಾರ್ಮಿಕ ಸಭೆಯಲ್ಲಿ
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕಿ ಶಾರದಾ ಎಸ್.ರಾವ್ ಹಾಗೂ ನಿವೃತ್ತ ಶಿಕ್ಷಕ ದಾಮೋದರ ರಾವ್ ಸಂಗಬೆಟ್ಟು ಅವರಿಗೆ ‘ ಶ್ರೀ ಶಾರದಾ ತಿಲಕ’ ಪ್ರಶಸ್ತಿ ಪ್ರಧಾನ ಮಾಡಲಾಯಿತು.


ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಶಿಕ್ಷಕರಾದ ಸುನೀಲ್ ಸಿಕ್ವೇರಾ, ಸುರೇಶ್, ಸಾಹೆದಾ ಬಾನು, ಮಲ್ಲಿಕಾ ಶೆಟ್ಟಿ ಅವರಿಗೆ ಗೌರವಾರ್ಪಣೆ ನಡೆಯಿತು.
ಎಸ್,ಎಸ್, ಎಲ್. ಸಿ. ಯಲ್ಲಿ ಅತ್ಯಧಿಕ ಅಂಕಗಳಿಸಿದ ಪೂಜಾ, ಶಮ, ಜೋಸ್ವಿನ್ ಕ್ರಾಸ್ತಾ, ಪಿಯುಸಿಯಲ್ಲಿ ವಿಶೇಷ ಸಾಧನೆಗೈದ ಅಕ್ಷತಾ ನಾಯಕ್ ಅವರನ್ನು ಪುರಸ್ಕರಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.


ಇದೇ ಸಂದರ್ಭದಲ್ಲಿ ಅಕ್ಷರ ಪ್ರತಿಷ್ಠಾನ ಅಲದಪದವು ಪ್ರಕಟಿಸಿದ ಪತ್ರಕರ್ತ ಗೋಪಾಲ ಅಂಚನ್ ಅವರು ಬರೆದ “ಸಭಾ ನಿರ್ವಹಣೆ ಹೇಗಿರಬೇಕು” ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು.
ಮೂಡಬಿದ್ರೆ ಜೈನಮಠದ ಭಾರತ ಭೂಷಣ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯ ಮಹಾಸ್ವಾಮಿ ಆಶೀರ್ವಚನ ನೀಡಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಶುಭ ಹಾರೈಸಿದರು.
ಸಮಿತಿಯ ಗೌರವಾಧ್ಯಕ್ಷ ಹರೀಂದ್ರ ಪೈ ನಯನಾಡು ಸಭಾಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಸುರೇಶ್ ಶೆಟ್ಟಿ, ಉದ್ಯಮಿಗಳಾದ ಅಮ್ಮು ರೈ ಹರ್ಕಾಡಿ, ಡಾ.ಟಿ.ವರದರಾಜ ಪೈ, ಜಗನ್ನಾಥ ಪೂಜಾರಿ ಬಂಟ್ವಾಳ, ಕಾರಿಂಜ ಯಕ್ಷ ವಾಸ್ಯಂ ಸಂಚಾಲಕಿ ಸಾಯಿಸುಮ ನಾವಡ, ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಎಸ್. ಐ ಸುತೇಶ್, ಶಾಲಾ ಮುಖ್ಯ ಶಿಕ್ಷಕಿ ಐರಿನ್ ಮೀರಾಂದ, ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಪೂಜಾರಿ ಕಯ್ಯಾಬೆ, ಶ್ರೀ ಶಾರದೋತ್ಸವ ಸೇವಾ ಸಮಿತಿ ಕಾರ್ಯದರ್ಶಿ ದಯಾನಂದ ಎಸ್.ಎರ್ಮೆನಾಡು, ಉಪಾಧ್ಯಕ್ಷ ಶೇಖರ ಪೂಜಾರಿ ಅಗಲ್ದೋಡಿ, ಪ್ರಮುಖರಾದ ಮೋಹನ್ ಶೆಟ್ಟಿ ನರ್ವಲ್ದಡ್ಡ, ಶಂಕರ ಶೆಟ್ಟಿ ಬೆದ್ರ್ ಮಾರ್, ಸತೀಶ್ ಕರ್ಕೆರಾ ಕಯ್ಯಾಬೆ ಮೊದಲಾದವರು ಉಪಸ್ಥಿತರಿದ್ದರು.
ಶ್ರೀ ಶಾರದೋತ್ಸವ ಸೇವಾ ಸಮಿತಿ
ಡಾ.ರಾಮಕೃಷ್ಣ ಎಸ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಗೌರವಾಧ್ಯಕ್ಷ
ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು. ಉತ್ಸವ ಸಮಿತಿ ಕೋಶಾಧಿಕಾರಿ ಗಣೇಶ್ ಶೆಟ್ಟಿ ಸೇವಾ ವಂದಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು.
ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ವೈವಿಧ್ಯ, ದಿನೇಶ್ ಕೊಡಪದವು ಸಾರಥ್ಯದಲ್ಲಿ ಯಕ್ಷ ಹಾಸ್ಯ ವೈಭವ ಕಾಯಕ್ರಮ,
ಸಂಜೆ ಶ್ರೀ ಶಾರದಾ ದೇವಿಯ ವೈಭವದ ಶೋಭಾಯಾತ್ರೆ ನಡೆಯಿತು.