ಎಸ್ಡಿಪಿಐ ವತಿಯಿಂದ ಫೆಬ್ರವರಿ 27ರಂದು ಉಳ್ಳಾಲ ನಗರಸಭೆಯ ವಿರುದ್ಧ ಬೃಹತ್ ಪ್ರತಿಭಟನೆ

ಮಂಗಳೂರು: ಎಸ್ಡಿಪಿಐ ಉಳ್ಳಾಲ ನಗರ ಸಮಿತಿ ಮತ್ತು ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 27ರಂದು ಬೆಳಿಗ್ಗೆ 10.30ಕ್ಕೆ ಉಳ್ಳಾಲ ನಗರಸಭೆಯ ವಿರುದ್ಧ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.
ಕಳೆದ ಎರಡು ವರುಷಗಳಿಂದ ಉಳ್ಳಾಲ ನಗರ ಸಭೆಯಲ್ಲಿ ಭೃಷ್ಟಾಚಾರ ತಾಂಡವಾಡುತ್ತಿದ್ದು , ಹಲವು ವಾರ್ಡ್ ಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಎದ್ದು ಕಾಣುತ್ತಿದೆ.
ಕುಡಿಯುವ ನೀರಿನ ಸಮಸ್ಯೆ ಹಾಗೂ ಮನೆ ತೆರಿಗೆ ಹೆಚ್ಚಳ ಸೇರಿದಂತೆ ಅನೇಕ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಉಳ್ಳಾಲ ನಗರ ಸಭೆಯ ಮುಂಭಾಗದಲ್ಲಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದು ಎಸ್ಡಿಪಿಐ ಉಳ್ಳಾಲ ನಗರ ಸಮಿತಿ ಅಧ್ಯಕ್ಷ ಎ.ಆರ್.ಅಬ್ಬಾಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.