ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಎಂ.ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬೃಹತ್ ಆರೋಗ್ಯ ಮೇಳ-ಮೇಲ್ದರ್ಜೆಗೊಂಡ ಪುಂಜಾಲಕಟ್ಟೆ ಅಸ್ಪತ್ರೆಗೆ ಶೀರ್ಘ ಶಿಲಾನ್ಯಾಸ-ರಾಜೇಶ್ ನಾಯ್ಕ್


ಬಂಟ್ವಾಳ:ಪ್ರಧಾನಿ ನರೇಂದ್ರ ಮೋದಿಯವರು ಕೋವಿಡನ್ನು ಅದ್ಬುತವಾಗಿ ನಿಭಾಯಿಸಿ ಜಗತ್ತು ಭಾರತದತ್ತ ನೋಡುವಂತೆ ಮಾಡಿದ್ದಾರೆ. ಮೋದಿಯವರು ಪಕ್ಷಕ್ಕೆ ಸೀಮಿತವಾಗದೆ ಇಡೀ ವಿಶ್ವಕ್ಕೆ ನಾಯಕರಾಗಿದ್ದಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಭಾನುವಾರ ಪುಂಜಾಲಕಟ್ಟೆ ಆರೋಗ್ಯ ಕೇಂದ್ರದ ವಠಾರದಲ್ಲಿ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ಜಿಲ್ಲಾ ಪಂಚಾಯತು ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ನೇತೃತ್ವದಲ್ಲಿ, ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆದ ಬೃಹತ್ ಆರೋಗ್ಯ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋವಿಡ್ ನಂತಹ ಕಷ್ಟಕಾಲದಲ್ಲಿ ಶಾಸಕನಾಗಿ ಜನರ ಸೇವೆ ಮಾಡುವಂತ ಅವಕಾಶ ತನಗೂ ಸಿಕ್ಕಿರುವುದು ಅತ್ಯಂತ ಖುಷಿಕೊಟ್ಟಿದೆ. ಆರೋಗ್ಯ ಕ್ಷೇತ್ರದ ಸೇವೆಗೆ ವಿಶೇಷ ಆಧ್ಯತೆ ನೀಡಲಾಗಿದ್ದು ಬಂಟ್ವಾಳ ತಾಲೂಕು ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಲಾಗಿದೆ.ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರವನ್ನು 12.40 ಕೋ.ರೂ. ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಲಾಗಿದ್ದು ಶೀರ್ಘದಲ್ಲಿ ಆರೋಗ್ಯ ಸಚಿವರಿಂದ ಶಿಲಾನ್ಯಾಸವನ್ನು ನೆರವೇರಿಸಲಾಗುವುದು ಎಂದು ರಾಜೇಶ್ ನಾಯ್ಕ್ ಹೇಳಿದರು.

ಮಂಗಳೂರು ಎ.ಜೆ.ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಶಾಂತ್ ಮಾರ್ಲ ಆರೋಗ್ಯ ಮೇಳವನ್ನು ಉದ್ಘಾಟಿಸಿ ಮಾತನಾಡಿ,ಕೇಂದ್ರ ಮತ್ತು‌ ರಾಜ್ಯ ಸರಕಾರ ಜನರ ಆರೋಗ್ಯದ ಹಿತದೃಷ್ಠಿಯಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಜನತೆ ಇದರ ಪ್ರಯೋಜವನ್ನು ಪಡೆದುಕೊಳ್ಳಬೇಕು. ಈ ಶಿಬಿರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕತ್ಸೆಗೆ ಬರುವಂತ‌ ರೋಗಿಗಳಿಗೆ ಎ.ಜೆ.ಆಸ್ಪತ್ರೆಯಿಂದ ಎಲ್ಲಾ ರೀತಿ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್,ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಆಶೋಕ್ ಕುಮಾರ್ ರೈ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ್, ಪಿಲಾತಬೆಟ್ಟು ಗ್ರಾ.ಪಂ. ಆದ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಪಿಲಾತಬೆಟ್ಟು ವ್ಯ. ಸೇ. ಸ. ಬ್ಯಾಂಕ್ ಅಧ್ಯಕ್ಷ ಕೆ.ಲಕ್ಮೀನಾರಾಯಣ ಉಡುಪ, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ರಿತೇಶ್ ಶೆಟ್ಟಿ, ಯೇನೆಪೊಯ ದಂತ ವೈದ್ಯೆ ಡಾ.ಪ್ರಕೃತಿ ಶೆಟ್ಟಿ, ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲ ಡಾ.ಜೋಸೆಫ್ ಎಂ.ಎನ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಜಯಾನಂದ ಪಿ., ಮಾಲಾಡಿ ಗ್ರಾ.ಪಂ.ಉಪಾಧ್ಯಕ್ಷ ದಿನೇಶ್ ಕರ್ಕೇರ, ಪಂಚಾಯತ್ ಸದಸ್ಯ ಪುನೀತ್ ಕುಮಾರ್, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಉದ್ಯಮಿಗಳಾದ ಹರೀಂದ್ರ ಪೈ, ಅಬ್ದುಲ್ ರಹಿಮಾನ್, ಸ್ಥಳೀಯ ಪ್ರಮುಖರಾದ ರಮೇಶ್ ಶೆಟ್ಟಿ ಮಜಲೋಡಿ, ಪ್ರವೀಣ್ ಶೆಟ್ಟಿ ಕುರ್ಡುಮೆ, ಮಂಜಪ್ಪ ಮೂಲ್ಯ, ಡಾ.ರಾಮಕೃಷ್ಣ ಎಸ್., ಆರೋಗ್ಯ ಸಂರಕ್ಷಣಾಧಿಕಾರಿ ಡಾ. ಜ್ಯೋತಿ, ಮಾಧವ ಬಂಗೇರ, ಪಿಡಿಒ ಪುರುಷೋತ್ತಮ, ಸಚಿನ್ ಕೋಡ್ಲಕ್ಕೆ, ನಾಗೇಶ್ ಪ್ರಭು, ರಾಜೇಶ್ ಪುಳಿಮಜಲು, ರತ್ನಾಕರ ಪಿ.ಎಂ. ಮೊದಲಾದವರಿದ್ದರು.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಪ್ರಾಸ್ತಾವಿಕವಾಗಿ ಮಾತನಾಡಿ, ತನ್ನ ಮೂವತ್ತು ವರ್ಷದ ಹೋರಾಟದ ಫಲವಾಗಿ ಶಾಸಕ ರಾಜೇಶ್ ನಾಯ್ಕ್ ಅವರ ಪರಿಶ್ರಮದಿಂದ ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿದ್ದು ಅತ್ಯಂತ ಸಂತೋಷವನ್ನು ತಂದಿದೆ ಎಂದರು.ಎ.ಜೆ.ಅಸ್ಪತ್ರೆ, ವೆನ್ಲಾಕ್ ಆಸ್ಪತ್ರೆ, ದೇರಳಕಟ್ಟೆ ಯೇನೆಪೊಯ ಆಸ್ಪತ್ರೆ, ದ.ಕ ಜಿ.ಪಂ., ಜಿಲ್ಲಾ ಅರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಬಂಟ್ವಾಳ, ಶಶಾಂಕ್ ಕ್ಯಾಶ್ಯೂ ಇಂಡಸ್ಟ್ರೀಸ್ ನೈನಾಡ್, ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರ, ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕು ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆರೋಗ್ಯ ಮೇಳ ಆಯೋಜಿಸಲಾಗಿತ್ತು.ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ.ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ವರದಿ: ಗೋಪಾಲ ಅಂಚನ್

ಸಂಪಾದಕರು:

ಯುವಧ್ವನಿ ನ್ಯೂಸ್ ಕರ್ನಾಟಕ.

ಮೊ:9449104318