ಪಿಲಾತಬೆಟ್ಟು: ಸಾರ್ವಜನಿಕ ಬಸ್ಸು ನಿಲ್ದಾಣ ಲೋಕಾರ್ಪಣೆ, ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

ಬಂಟ್ವಾಳ: ಪುಂಜಾಲಕಟ್ಟೆ ಆಸ್ಪತ್ರೆಯ ಬಳಿಯಲ್ಲಿ ವಲಯ ಕಾಂಗ್ರೇಸ್, ಪಕ್ಷದ ಪ್ರಮುಖರು ಹಾಗೂ ಸದಸ್ಯರ ಸಹಕಾರದಲ್ಲಿ ನಿರ್ಮಿಸಿದ ಸಾರ್ವಜನಿಕ ಬಸ್ಸು ತಂಗುದಾಣವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ರೈ ಅವರು ಸಿದ್ದರಾಮಯ್ಯ ಸರಕಾರದ 5000 ಕೋಟಿಗಿಂತಲೂ ಅಧಿಕ ಅನುದಾನದಲ್ಲಿ ಬಂಟ್ವಾಳ ಕ್ಷೇತ್ರ ಸಮಗ್ರವಾಗಿ ಅಭಿವೃದ್ಧಿ ಕಂಡಿದೆ. ನಾನು ಶಾಸಕನಾಗಿ, ಸಚಿವನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದು ಮುಂದೆಯೂ ಜನತೆಗೆ ಸೇವೆ ನೀಡಲು ಬದ್ಧನಿದ್ದೇನೆ ಎಂದರು. ಬಿಜೆಪಿಯ ನಾಯಕರು ಸಹ ರಮನಾಥ ರೈ ಅಭಿವೃದ್ಧಿ ಮಾಡಿಲ್ಲ ಎಂದು ಎಲ್ಲಿಯೂ ಹೇಳಿಕೆ ಕೊಟ್ಟಿಲ್ಲ. ಯಾಕೆಂದರೆ ನನ್ನ ಅಭಿವೃದ್ಧಿ ಕಾರ್ಯದ ಬಗ್ಗೆ ಅವರಿಗೂ ಅರಿವಿದೆ. ಆದರೆ ಧರ್ಮಾಧಾರಿತ ರಾಜಕೀಯ ಮಾಡಿ ಕಳೆದ ಬಾರಿ ಚುನಾವಣೆಯಲ್ಲಿ ಅಪಪ್ರಚಾರದಿಂದ ಸೋಲಿಸಿದರು. ಆದರೆ ಈ ಬಾರಿ ನಿಮ್ಮೆಲ್ಲರ ಆಶೀರ್ವಾದದಿಂದ ಮತ್ತೆ ಗೆದ್ದು ಬಂದು ಅಭೂತಪೂರ್ವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತೇನೆ ಎಂದು ರೈ ಹೇಳಿದರು.

ಕಾಂಗ್ರೆಸ್ ಸೇರ್ಪಡೆಗೊಂಡ ಬಿಜೆಪಿಯ ಕಾರ್ಯಕರ್ತರು

ಈ ಸಂದರ್ಭದಲ್ಲಿ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾದ ಲಕ್ಷ್ಮಣ ಪೂಜಾರಿ ನಾಕುನಾಡು, ಸುಧಾಕರ ಪೂಜಾರಿ ನಾಕುನಾಡು, ತುಳಸಿ ದುಗಮರಗುಡ್ಡೆ ಇವರು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಪಕ್ಷದ ಪ್ರಮುಖರಾದ ಬಿ.ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಸುಧಾಕರ ಶೆಣೈ ಖಂಡಿಗ, ಮೋಹನ್ ಸಾಲಿಯನ್, ವಿಕ್ಟರ್ ಡಿಸೋಜ, ಪುಷ್ಪಲತಾ ಮೋಹನ್ ಸಾಲಿಯನ್, ವನಿತಾ ಆನಂದ, ಲೀಲಾವತಿ ಶೆಟ್ಟಿ, ನೆಲ್ವಿಸ್ಟರ್ ಪಿಂಟೊ, ಬಾಲಾಜಿ ರಾವ್, ಬೆನಡಿಕ್ಟ ಡಿಸೋಜಾ, ಅರುಣ್ ಫೆರ್ನಾಂಡಿಸ್, ಪುರುಷೋತ್ತಮ ನಾಕುನಾಡು, ವಿಠಲಶೆಟ್ಟಿ, ವಸಂತ, ಅಂಬ್ರೋಸ್ ಮೋರಸ್, ಲಾರೆನ್ಸ್ ಡಿಸೋಜ, ಪ್ರಮೋದ್, ಕರುಣಾಕರ ನಾಕುನಾಡು, ನಾರಾಯಣ ಪೂಜಾರಿ ನಾಕುನಾಡು ಉಪಸ್ಥಿತರಿದ್ದರು. ಜಿಲ್ಲಾ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅವಿಲ್ ಮೊರಸ್ ಕಾರ್ಯಕ್ರಮ ನಿರೂಪಿಸಿದರು.

ವರದಿ: ಗೋಪಾಲ ಅಂಚನ್

ಸಂಪಾದಕರು: ಯುವಧ್ವನಿ ನ್ಯೂಸ್ ಕರ್ನಾಟಕ. ಮೊ:9449104318