ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ವಾಮದಪದವು, ಆಲದಪದವು-ಎಪ್ರಿಲ್ 23ರಂದು ಗುರುಪೂಜೆ, ಗೆಜ್ಜೆಗಿರಿ ಮೇಳದ ಯಕ್ಷಗಾನ

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ವಾಮದಪದವು, ಆಲದಪದವು ಆಶ್ರಯದಲ್ಲಿ ಗುರುಪೂಜೆ, ಯಕ್ಷಗಾನ ಹಾಗೂ ಕ್ರೀಡಾಕೂಟ ನಡೆಸುವ ಬಗ್ಗೆ ಸಮಾಲೋಚನಾ ಸಭೆಯು ಭಾನುವಾರ ಸಂಘದ ಸಮುದಾಯ ಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷತೆ ಚೇತನ್ ಕುಮಾರ್ ಕುದ್ಕಂದೋಡಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಎಪ್ರಿಲ್ 23ರಂದು ಬೆಳಿಗ್ಗೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಗುರುಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ, ಸಂಜೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದ ಯಕ್ಷಗಾನ ಬಯಲಾಟ , ರಾತ್ರಿ ಅನ್ನಸಂತರ್ಪಣೆ ನಡೆಸುವುದು ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಮಾಜ ಭಾಂದವರನ್ನು ಒಗ್ಗೂಡಿಸುವ ದೃಷ್ಠಿಯಿಂದ ಸೌಹಾರ್ದ ಕ್ರೀಡಾಕೂಟವನ್ನು ನಡೆಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಚೆನ್ನೈ ತೋಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತಿ ರಾಜೇಂದ್ರ ಪೂಜಾರಿ, ಇರ್ವತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಂ.ಪಿ. ಶೇಖರ ಪೂಜಾರಿ , ಹಿರಿಯರಾದ ಅಣ್ಣಿ ಪೂಜಾರಿ ಬೆಟ್ಟುಗದ್ದೆ, ಸಾಂಸ್ಕ್ರತಿಕ ಸಮಿತಿಯ ಅಧ್ಯಕ್ಷರಾದ ಶೇಖರ ಪೂಜಾರಿ ಅಗಲ್ದೋಡಿ, ಕ್ರೀಡಾ ಸಮಿತಿಯ ಅಧ್ಯಕ್ಷರಾದ ಪುಷ್ಪ ವಿಶ್ವನಾಥ ಪೂಜಾರಿ ವಾಮದಪದವು, ಸಂಘದ ಉಪಾಧ್ಯಕ್ಷ ಕಿಶೋರ್ ಕುಮಾರ್ ನಾಯರ್ಕುಮೇರು, ಪದಾಧಿಕಾರಿಗಳು, ವಿವಿಧ ಸಮಿತಿಗಳ ಪ್ರಮುಖರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಚಂದಪ್ಪ ಪೂಜಾರಿ ಆಗಮೆ ಸಭಾ ಕಲಾಪಗಳನ್ನು ನಿರ್ವಹಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318