ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ, ಸುತ್ತುಪೌಳಿ ನಿರ್ಮಾಣಕ್ಕೆ ಶಿಲಾನ್ಯಾಸ-ವಿಜ್ಞಾಪನಾ ಪತ್ರ ಬಿಡುಗಡೆ

ಬಂಟ್ವಾಳ: ದೇವರ ಅನುಗ್ರಹವೊಂದಿದ್ದರೆ ಯಾವುದೇ ಕ್ಷೇತ್ರದಲ್ಲಿ ವಿಜಯ ಸಾಧಿಸಬಹುದು.ರಾಯಿ ಕ್ಷೇತ್ರದ ಪುನರ್ ನಿರ್ಮಾಣದ ಕೈಂಕರ್ಯದಲ್ಲೂ ದೇವರ ಅನುಗ್ರಹ ಪ್ರಾಪ್ತವಾಗಲಿ. ದೇವಸ್ಥಾನ ಜೀರ್ಣೋದ್ಧಾರದ ಪುಣ್ಯ ಕಾರ್ಯದಲ್ಲಿ ಸಮಸ್ತ ಜನತೆಯ ಸಂಘಟಿತ ಪ್ರಯತ್ನ ಸಾಗಲಿ ಎಂದು
ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಪಾದಂಗಳವರು ಹೇಳಿದರು.

ಸೋಮವಾರ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಗರ್ಭಗುಡಿ, ತೀರ್ಥಮಂಟಪ ಹಾಗೂ ಸುತ್ತು ಪೌಳಿಯ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿ ಆಶೀರ್ವಚನ ನೀಡಿದರು.

ಶ್ರೀ ಕ್ಷೇತ್ರ ಕಟೀಲಿನ ಆನುವಂಶಿಕ ಅರ್ಚಕ ಕಮಲಾದೇವಿ ಪ್ರಸಾದ ಆಸ್ರಣ್ಣ ವಿಜ್ಞಾಪನಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿ, ರಾಯಿ ಎಂಬ ಹೆಸರಿಗೆ ಸಂಪತ್ತು ಮತ್ತು ಸೂರ್ಯ ಎಂಬ ಅರ್ಥವಿದೆ. ಸಂಪತ್ತು ನಿಂತ ನೀರಾಗಬಾರದು, ಅದು ನಿರಂತರ ಹರಿಯುತ್ತಿರಬೇಕು. ರಾಯಿ ಕ್ಷೇತ್ರದ ಅಭಿವೃದ್ಧಿಗೆ ಸಜ್ಜನರ ಸಂಪತ್ತು ನಿರಂತರ ಹರಿದು ಬರಲಿ ಎಂದರು.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿ ಹಿಂದು ಸಮಾಜ ಸದಾ ಜಾಗೃತವಾಗಿರಬೇಕಾದ ಅಗತ್ಯವಿದೆ. ಧಾರ್ಮಿಕ ಕೇಂದ್ರಗಳ ಪುನರುತ್ಥಾನದೊಂದಿಗೆ ಮಕ್ಕಳಿಗೆ ಸಂಸ್ಕಾರ, ಸಂಸ್ಕ್ರತಿಯ ಮೌಲ್ಯಯುತ ಶಿಕ್ಷಣವನ್ನು ನೀಡುವ ಮೂಲಕ ಸಮಾಜವನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು.

ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಿದ್ದರು. ತನ್ನ ಶಾಸಕತ್ವದ ಅವಧಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಹುತೇಕ ಆರಾದನಾ ಕೇಂದ್ರಗಳ ಅಭಿವೃದ್ಧಿಗೆ ಗರಿಷ್ಠ ಪ್ರಮಾಣದ ಅನುದಾನ ನೀಡಲಾಗಿದೆ. ರಾಯಿ ದೇವಸ್ಥಾನದ ಅಭಿವೃದ್ದಿಗೂ ನನ್ನಿಂದಾದ ಸಹಕಾರ ನೀಡುತ್ತೇನೆ ಎಂದರು.

ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ, ಕಿಯೋನಿಕ್ಸ್ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ ಶುಭ ಹಾರೈಸಿದರು.

ತಂತ್ರಿ ವ್ಯಾಸ ಪಾಂಗಣ್ಣಾಯ, ಶ್ರೀ ಕ್ಷೇ. ಧ.ಗ್ರಾ.ಯೋಜನೆ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ, ಮುಂಬೈ ಆಲ್ಟೀಸ್ ಸ್ಟ್ರಾಟಜಿಕ್ ಕನ್ಸಲ್ಟಿಂಗ್ ನಿರ್ದೇಶಕ ಸುರೇಶ್ ಶಿವರಾಮ ಗೌಡ ಮುದ್ದಾಜೆ, ಗ್ರಾ.ಪಂ. ಅಧ್ಯಕ್ಷೆ ರತ್ನಾ ಆನಂದ, ಪೂಂಜ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಕುಮಾರ ಚೌಟ, ಹಿಂದು ಧರ್ಮೋತ್ಥಾನ ಟ್ರಸ್ಟ್ ಸಮಿತಿ ಅಧ್ಯಕ್ಷ ದುರ್ಗಾದಾಸ ಶೆಟ್ಟಿ ಮಾವಂತೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವರ ಸಂಘದ ಅಧ್ಯಕ್ಷ ಶೇಖರ್ ಅಂಚನ್ ಪಿಲ್ಕಾಜೆಗುತ್ತು, ರಾಯಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಂದರ ಭಂಡಾರಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸದಾನಂದ ಗೌಡ ಮತ್ತಾವು, ಪ್ರಧಾನ ಆರ್ಚಕ ಡಿ.ರಾಮಚಂದ್ರ ಭಟ್ ದೈಲ, ಅರ್ಚಕ ದಿನೇಶ್ ಭಟ್ ದೈಲ, ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ರಾಜೇಶ್ ಶಿವನಗರ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ರಾಜೇಶ್ ಶೆಟ್ಟಿ ರಾಯಿ ಶೀತಲ, ಪಡ್ರಾಯಿಗುತ್ತು ಸಚಿನ್ ಕುಮಾರ್ ಜೈನ್, ಶ್ರೀ ಕ್ಷೇತ್ರ ಬದನಡಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರವೀಂದ್ರ ಪೂಜಾರಿ ಬದನಡಿ, ರಾಯಿ ಒಕ್ಕಲಿಗ ಸಂಘ ಅಧ್ಯಕ್ಷ ವಸಂತ ಗೌಡ ಮುದ್ದಾಜೆ, ಜೀರ್ಣೋದ್ಧಾರ ಸಮಿತಿ ಪ್ರ.ಕಾರ್ಯದರ್ಶಿ ಚಂದ್ರಶೇಖರ ಗೌಡ ಕಾರಂಬಡೆ, ಮಹಿಳಾ ಭಜನಾ ಮಂಡಳಿ ಅಧ್ಯಕ್ಷೆ ಇಂದಿರಾ ಮಧುಕರ ಬಂಗೇರ, ಸಮಿತಿ ಸದಸ್ಯೆ ಹೇಮಾ ಎಚ್. ರಾವ್ ಉಪಸ್ಥಿತರಿದ್ದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ ನೋಣಾಲ್ ಗುತ್ತು ಸ್ವಾಗತಿಸಿದರು. ದಿನೇಶ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318