ಎಪ್ರಿಲ್ 23ರಂದು ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ, ಗೆಜ್ಜೆಗಿರಿ ಮೇಳದ ಯಕ್ಷಗಾನ-ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ವಾಮದಪದವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ಎಪ್ರಿಲ್ 23ರಂದು ಆಲದಪದವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯುವ ಗುರುಪೂಜೆ ಮತ್ತು ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆ ಶುಕ್ರವಾರ ಬಿಡುಗಡೆಗೊಂಡಿತು.


ಸಂಘದ ಅಧ್ಯಕ್ಷ ಚೇತನ್ ಕುಮಾರ್ ಕುದ್ಕಂದೋಡಿ ಮಾತನಾಡಿ ಸಂಘದ ಸದಸ್ಯರು, ಸಮಾಜ ಭಾಂದವರು ಈ ಕಾರ್ಯಕ್ರಮದ ಯಶಸ್ವಿಗಾಗಿ ಸಕ್ರೀಯವಾಗಿ ತೊಡಗಿಸಿಕೊಳ್ಳಬೇಗಾಗಿದೆ. ಪ್ರತೀ ಮನೆಗೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ತಲುಪಿಸುವಲ್ಲಿ ಪ್ರತಿಯೊಬ್ಬರೂ ವಿಶೇಷ ಮುತುವರ್ಜಿ ವಹಿಸಬೇಕಾಗಿದೆ ಎಂದರು.
ಸಂಘದ ಪ್ರಧಾನ ಕಾರ್ಯದರ್ಶಿ ಚಂದಪ್ಪ ಪೂಜಾರಿ ಆಗಮೆ, ಯಕ್ಷಗಾನ ಸಮಿತಿ ಅಧ್ಯಕ್ಷ ಶೇಖರ್ ಪೂಜಾರಿ ಅಗಲ್ದೋಡಿ, ಸಂಘದ ಪ್ರಮುಖರಾದ ಕಿಶೋರ್ ಕುಮಾರ್ ನಾಯರ್ಕುಮೇರು, ಗೋಪಾಲ ಅಂಚನ್, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಎಪ್ರಿಲ್ 23ರಂದು ಬೆಳಿಗ್ಗೆ 11.30ಕ್ಕೆ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಗುರುಪೂಜೆ, 12.30ಕ್ಕೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 7ರಿಂದ ಶ್ರೀ ಆದಿ ಧೂಮಾವತಿ, ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ. ಸಂಜೆ 7ಕ್ಕೆ ಚೌಕಿ ಪೂಜೆ, ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318