ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ-ಬ್ರಹ್ಮಕಲಶೋತ್ಸವ ಆಮಂತ್ರಣಪತ್ರ ಬಿಡುಗಡೆ-ಮೇ 20ರಿಂದ 22ರವರೆಗೆ ಬ್ರಹ್ಮಕಲಶ ಸಂಭ್ರಮ

ಬಂಟ್ವಾಳ: ತಾಲೂಕಿನ ಕುಡಂಬೆಟ್ಟು ಗ್ರಾಮದ ಉರುಡಾಯಿ ಶ್ರೀ ಮುಖ್ಯಪ್ರಾಣ ದೇವಸ್ಥಾನ ಶಿಲಾಮಯವಾಗಿ ಪುನರ್ ನಿರ್ಮಾಣಗೊಂಡಿದ್ದು, ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.


ಮೇ 20 ರಿಂದ ಮೇ 22 ರವರೆಗೆ ಬ್ರಹ್ಮಕಲಶೋತ್ಸವವು ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ ಸಂಪನ್ನಗೊಳ್ಳಲಿದೆ.
ಶ್ರೀ ಕ್ಷೇತ್ರ ಕಾರಿಂಜದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪಿ.ಜಿನರಾಜ ಆರಿಗ ಪಚ್ಚಾಜೆಗುತ್ತು ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ದೇವಸ್ಥಾನದ ಪುನರ್ ನಿರ್ಮಾಣದ ಪುಣ್ಯಕಾರ್ಯದಲ್ಲಿ ಸರ್ವರೂ ಸಕ್ರೀಯವಾಗಿ ಭಾಗವಹಿಸುವ ಮೂಲಕ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು. ಜಿ.ಪಂ.ಮಾಜಿ ಸದಸ್ಯ, ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇವಸ್ಥಾನ ಪುನರ್‌ನಿರ್ಮಾಣ ಕಾರ್ಯದಲ್ಲಿ ಭಾಗವಹಿಸುವುದು ನಮಗೊದಗಿದ ಯೋಗ ಭಾಗ್ಯವಾಗಿದೆ ಎಂದು ಹೇಳಿದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಮ್ಮು ರೈ ಹರ್ಕಾಡಿ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ ವಾಮದಪದವು, ಕಾರ್ಯಾಧ್ಯಕ್ಷರಾದ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು, ವೀರೇಂದ್ರ ಅಮೀನ್ ವಗ್ಗ, ಅನಂತ ಪೈ ವಾಮದಪದವು, ಉದ್ಯಮಿ ಹರೀಂದ್ರ ಪೈ, ಅರ್ಚಕ ಪ್ರಶಾಂತ್ ಐತಾಳ್, ಕೋಶಾಧಿಕಾರಿ ಜಯರಾಮ ಕುಲಾಲ್, ಪ್ರಧಾನ ಕಾರ್ಯದರ್ಶಿ ಅನಂತರಾಮ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.
ಸುರೇಶ್ ಉರುಡಾಯಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪ್ರಕಾಶ್ ಗಟ್ಟಿ ವಂದಿಸಿದರು.

ವರದಿ:ಗೋಪಾಲ ಅಂಚನ್
ಸಂಪಾದಕರು:
ಯುವಧ್ವನಿ ನ್ಯೂಸ್ ಕರ್ನಾಟಕ
ಮೊ:9449104318