ಕಲ್ಲಡ್ಕ ಇರ್ವತ್ತೂರು ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್-ರಕ್ತದಾನ, ನೇತ್ರ, ದಂತ ತಪಾಸಣೆ, ರಂಗಪೂಜೆ, ಸಭಾಕಾರ್ಯಕ್ರಮ, ನಾಟಕ ಪ್ರದರ್ಶನ

ಬಂಟ್ವಾಳ: ಕಲ್ಲಡ್ಕ ಇರ್ವತ್ತೂರು ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಆಶ್ರಯದಲ್ಲಿ ರಕ್ತದಾನ ಮತ್ತು ನೇತ್ರ ಹಾಗೂ ದಂತ ತಪಾಸಣಾ ಶಿಬಿರ ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಂಜೆ ದೇವರಿಗೆ ರಂಗಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.
ರಾತ್ರಿ ನಡೆದ ಸಮಾರೋಪ ಸಮಾರಂಭವನ್ನು ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕು ಅಧ್ಯಕ್ಷ ಕೆ.ಲಕ್ಷ್ಮೀನಾರಾಯಣ ಉಡುಪ ಉದ್ಘಾಟಿಸಿದರು. ಪಾಂಗಲ್ಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ರಾಮಕೃಷ್ಣ ಎಸ್. ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿಗಳಾದ ಟಿ.ಹರೀಂದ್ರ ಪೈ, ಶೇಖರ ಪೂಜಾರಿ ಅಗಲೋಡಿ, ಡೆನ್ನಿಸ್ ಫೆರ್ನಾಂಡಿಸ್, ಅಬ್ದುಲ್ ನಝೀರ್ ಸಾಹೇಬ್, ರಮೇಶ ಪೂಜಾರಿ ಕುಡ್ಮೇರು, ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಕಾಶ್ ಪೂಜಾರಿ ಕಲ್ಲುಕೊಡಂಗೆ, ಗ್ರಾಮ ಪಂಚಾಯತು ಸದಸ್ಯರಾದ ಎಂ.ಪಿ.ಶೇಖರ ಪೆತ್ತರ, ಶುಭಕರ ಶೆಟ್ಟಿ ಮಠ, ಸುದೀಂದ್ರ ಶೆಟ್ಟಿ ಎರ್ಮೆನಾಡು, ದಯಾನಂದ ಎಸ್.ಎರ್ಮೆನಾಡು ಅತಿಥಿಗಳಾಗಿ ಭಾಗವಹಿಸಿದರು.

ರಂಗ ಕಲಾವಿದರಾದ ಕೃಷ್ಣ ಜಿ.ಮಂಜೇಶ್ವರ ಹಾಗೂ ರವಿ ರಾಮಕುಂಜ ಅವರನ್ನು ಗೌರವಿಸಲಾಯಿತು.

ಶ್ರೀ ದುರ್ಗಾ ಫ್ರೆಂಡ್ಸ್ ಯುವಕರ ಟ್ರಸ್ಟ್ ಅಧ್ಯಕ್ಷ ರಮೇಶ್ ನಾಯ್ಕ್ ಕೈಮಾರು, ಕಾರ್ಯದರ್ಶಿ ಸುರೇಶ್ ಪೂಜಾರಿ ಕಲ್ಲಡ್ಕ, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಪುನೀತ್ ಶೆಟ್ಟಿ ಕೈಮಾರು ಸ್ವಾಗತಿಸಿದರು. ಪತ್ರಕರ್ತ ಗೋಪಾಲ ಅಂಚನ್ ಕಾರ್ಯಕ್ರಮ ನಿರೂಪಿಸಿದರು. ಸತೀಶ್ ಕರ್ಕೆರ ಕಯ್ಯಾಬೆ ವಂದಿಸಿದರು. ನಂತರ ಮಂಜೇಶ್ವರ ಶಾರದಾ ಆರ್ಟ್ಸ್ ತಂಡದ ಐಸಿರಿ ಕಲಾವಿದರಿಂದ ಕಲ್ಜಿಗದ ಮಾಯ್ಕಾರೆ ಪಂಜುರ್ಲಿ ತುಳು ಪೌರಾಣಿಕ ಭಕ್ತಿ ಪ್ರಧಾನ ನಾಟಕ ಪ್ರದರ್ಶನಗೊಂಡಿತು.

ಸೇವಾಂಜಲಿ ಪ್ರತಿಷ್ಠಾನ ಪರಂಗಿಪೇಟೆ, ಜಸ್ಟಿಸ್ ಕೆ.ಎಸ್.ಹೆಗ್ಡೆ ಚಾರಿಟೇಬಲ್ ಅಸ್ಪತ್ರೆ ದೇರಳಕಟ್ಟೆ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಅಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು ಹಾಗೂ ಎ.ಜೆ.ದಂತ ವೈದ್ಯಕೀಯ ಅಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ವೈದ್ಯಕೀಯ ಶಿಬಿರ ಆಯೋಜಿಸಲಾಗಿತ್ತು.

✍????ಗೋಪಾಲ ಅಂಚನ್
ಮೊ: 9449104318