ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಸಂಘಟನೆಗೆ 36ನೇ ವಾರ್ಷಿಕ ಸಮಾವೇಷದ ಸಂಭ್ರಮ

ಬಂಟ್ವಾಳ: ಸಮಾಜದ ಜನರ ಧ್ವನಿಯಾಗಿ, ಬ್ರಹ್ಮಶ್ರೀ ನಾರಾಯಣ ಗುರುವರ್ಯರ ತತ್ವಾದರ್ಶದ ಭದ್ರ ಅಡಿಪಾಯದೊಂದಿಗೆ ಮುನ್ನಡೆಯುತ್ತಾ ತನ್ನ ವಿಶೇಷ ಸೇವಾ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಯುವವಾಹಿನಿ ಸಂಘಟನೆ ಇದೀಗ 36ನೇ ವರ್ಷದ ಸಮಾವೇಷದ ಸಂಭ್ರಮ-ಸಡಗರದಲ್ಲಿದೆ.

33 ಘಟಕಗಳೊಂದಿಗೆ ಮೂರು ಸಾವಿರಕ್ಕೂ ಹೆಚ್ಚು ಸದಸ್ಯರನ್ನು ಒಳಗೊಂಡಿರುವ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಷವು ಡಿಸೆಂಬರ್ 24ರಂದು ಬೆಂಜನಪದವು ಶುಭಲಕ್ಷ್ಮೀ ಅಡಿಟೋರಿಯಂನಲ್ಲಿ ಅಭೂತಪೂರ್ವವಾಗಿ ಸಂಪನ್ನಗೊಳ್ಳಲಿದ್ದು ಸಕಲ ಪೂರ್ವಭಾವಿ ಸಿದ್ಧತೆಗಳು ಭರದಿಂದ ಸಾಗುತ್ತಿದೆ.

ಯುವವಾಹಿನಿ ಬಂಟ್ವಾಳ ತಾಲೂಕು ಘಟಕವು ಸಮಾವೇಷದ ಆತಿಥ್ಯ ವಹಿಸಿಕೊಂಡಿದ್ದು ತಾಲೂಕು ಘಟಕದ ಅಧ್ಯಕ್ಷ ಹರೀಶ್ ಕೋಟ್ಯಾನ್ ಕುದನೆ ನೇತೃತ್ವದಲ್ಲಿ ವಿಶಿಷ್ಠ ರೀತಿಯಲ್ಲಿ ಆತಿಥ್ಯದೊಂದಿಗೆ ಸಮಾವೇಷದ ಯಶಸ್ವಿಗಾಗಿ ಸಜ್ಜಾಗುತ್ತಿದೆ.

ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದೊಂದಿಗೆ ನಡೆಯುವ 36ನೇ ವಾರ್ಷಿಕ ಸಮಾವೇಷವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಉದ್ಘಾಟಿಸುವರು. ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ರಾಜೇಶ್ ಬಿ.ಅಧ್ಯಕ್ಷತೆ ವಹಿಸುವರು. ನಾರ್ದನ್ ಸ್ಕೈ ಪ್ರಾಪರ್ಟೀಸ್ ನಿರ್ದೇಶಕಿ ಕೃತಿನ್ ಅಮೀನ್ ಯುವಸಿಂಚನ ವಿಶೇಷಾಂಕ ಬಿಡುಗಡೆ ಮಾಡುವರು. ಅಸಿಸ್ಟೆಂಟ್ ಕಮಿಷನರ್ ಆಫ್ ಪೊಲೀಸ್ ರೀನಾ ಸುವರ್ಣ ಪ್ರಶಸ್ತಿ ಪ್ರದಾನ ಮಾಡುವರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ| ತುಕಾರಾಮ ಪೂಜಾರಿ ಪ್ರಧಾನ ಭಾಷಣ ಮಾಡುವರು. ಮುಖ್ಯಮಂತ್ರಿಗಳ ಮಾಜಿ ಆಪ್ತ ಸಹಾಯಕ ನಿರ್ಮಲ್ ಜಗನ್ನಾಥ ಬಂಗೇರಾ, ಉದ್ಯಮಿಗಳಾದ ನಟೇಶ್ ಪೂಜಾರಿ, ಲೋಕೇಶ್ ಪೂಜಾರಿ ಕಲ್ಲಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ಪ್ರಶಸ್ತಿ-ಪುರಸ್ಕಾರ

ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷ ಕೆ.ಚಿತ್ತರಂಜನ್ ಅವರಿಗೆ ಸಾಧನಾ ಶ್ರೀ ಪ್ರಶಸ್ತಿ, ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಸಾಧನಾ ಶ್ರೇಷ್ಠ ಪ್ರಶಸ್ತಿ ಮತ್ತು ಶ್ರೀನಿವಾಸ ಪೂಜಾರಿ ಮೆಲ್ಕಾರ್, ಮನೋಜ್ ಕಟ್ಟೆಮಾರ್, ಅಕ್ಷತಾ ಕುಡ್ಲ ಅವರಿಗೆ ಯುವ ಸಾಧನಾ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ ಎಂದು ಸಮಾವೇಷದ ಸಂಚಾಲಕ ಹರೀಶ್ ಕೋಟ್ಯಾನ್ ಕುದನೆ, ನಿರ್ದೇಶಕ ಭುವನೇಶ್ ಪಚ್ಚಿನಡ್ಕ ತಿಳಿಸಿದ್ದಾರೆ.

✍????ಗೋಪಾಲ ಅಂಚನ್
ಮೊ:9449104318