ಚೆನ್ನೈತೋಡಿ ಗ್ರಾಮ ಪಂಚಾಯತ್ ವತಿಯಿಂದ ನೀರಿನ ಘಟಕ ಹಸ್ತಾಂತರ

ಯುವಧ್ವನಿ ನ್ಯೂಸ್

ವಾಮದಪದವು: ಚೆನ್ನೈತೋಡಿ ಗ್ರಾಮಪಂಚಾಯತ್ ವತಿಯಿಂದ 2020-21 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪಂಗಡದ
25% ಅನುದಾನ ಹಾಗೂ 2021-22 ನೇ ಸಾಲಿನ ಅಂಗವಿಕಲರ 0.5% ಅನುದಾನದಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಿಸಲಾಯಿತು.


ಡಾ. ಬಿರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಅಂಗವಿಕಲ ಅರ್ಹ ಫಲಾನುಭವಿಗಳಿಗೆ ನೀರಿನ ಘಟಕವನ್ನು ಹಸ್ತಾಂತರಿಸಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ರಾಜೇಂದ್ರ, ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಅಭಿವೃದ್ಧಿ ಅಧಿಕಾರಿ ರಾಜಶೇಖರ ರೈ, ಗ್ರಾಮ ಪಂಚಾಯತ್ ಸದಸ್ಯರಿದ್ದರು.